ಒಂದು, ಎರಡು……

ಇಡಿಯ ಪುಟದಿ ಖಾಲಿ ಪದ
ಬಣ್ಣ ನೀನೆ ಅಕ್ಷರ,
ಜಗದಲೆಲ್ಲಿ ಒಂದೆ ಹದ
ಎಲ್ಲ ತಾನೆ ನಶ್ವರ..?!

ಬೆಟ್ಟವು ನಿನ್ನದೆ, ಬಯಲೂ ನಿನ್ನದೆ.., ಹಬ್ಬಿ ನಗಲಿ ಪ್ರೀತಿ

***

ಹೂವ ಹಂಗು ಯಾಕೆ ಬೇಕು
ನೋವು ನುಂಗಿ ಹಾಡಲು?
ಹೊಳೆಯ ಹೊದಿಕೆ ಮಾತ್ರ ಸಾಕು
ನೆರಳಿಗೆ ನಿರಾಳದಿ ಮೈಚಾಚಲು.!

ಕೊಡುವುದೇನು ಕೊಂಬುದೇನು ಒಲವು-ಸ್ನೇಹ-ಪ್ರೇಮ..

***

ತೆರೆದ ತೀರದ ಗುಡಿಯ
ಹೊನ್ನ ಬಾನ್ಮುಡಿ ಕವಿತೆ
ಹೊಸಿಲ ಕಿಟಕಿ ರಂಗವಲ್ಲಿಯ
ಗಂಧಗಂಧದಲಿರಲಿ ನಿನ್ನ ಸ್ಮಿತೆ..

ಉದಯಾಸ್ತಗಳಲಿ ಲೋಕ ತಾನಲ್ಲ ಬರಿಯ ಮಣ್ಣು..

***

— ರಾಘವೆಂದ್ರ ಹೆಗಡೆ

******

* ‘ರಾ ಗ ನೌ ಕೆ’ ಯಾನ ಶುರುವಾಗಿ ಇಂದಿಗೆ ಎರಡು ಸಂವತ್ಸರಗಳು ಕಳೆದಿವೆ. ನನ್ನ ಬರಹಗಳಿಗೆ ಪ್ರೋತ್ಸಾಹ ನೀಡಿದ ಸರ್ವರಿಗೂ ಕೃತಜ್ಞತೆಗಳು. 🙂

* ಇದನ್ನೂ ಓದಿ: ಮೋಡದ ಮೇಲೊಂದು ವರ್ಷದ ನಡಿಗೆ..

* ಮೇಲಿನ ಚಿತ್ರಗಳ ಅಡಿಬರಹಕ್ಕೆ ಬಳಸಿಕೊಂಡಿರುವ ಸಾಲುಗಳು ಮತ್ತು ಚಿತ್ರಸ್ಥಳ :

(೧) ಬೆಟ್ಟವು ನಿನ್ನದೆ, ಬಯಲೂ ನಿನ್ನದೆ.., : ಕೆ. ಎಸ್. ನರಸಿಂಹ ಸ್ವಾಮಿ
ಚಿತ್ರ: ಕುಮಟಾ – ಮೂರೂರು ಮಾರ್ಗದಲ್ಲಿ

(೨) ಕೊಡುವುದೇನು ಕೊಂಬುದೇನು.. : ಗೌರೀಶ್ ಕಾಯ್ಕಿಣಿ
ಚಿತ್ರ: ನನ್ನ ಹುಟ್ಟೂರು ಕತಗಾಲ ಸನಿಹ ಹರಿವ ಅಘನಾಶಿನಿ ನದಿ

(೩) ಉದಯಾಸ್ತಗಳಲಿ.. : ಕೆ. ಎಸ್. ನಿಸಾರ್ ಅಹಮದ್
ಚಿತ್ರ: ಸುರತ್ಕಲ್ ಸನಿಹ ಸೆರೆಯಾದ ಸೂರ್ಯಾಸ್ತ

******

— ರಾಘವೇಂದ್ರ ಹೆಗಡೆ.

About ರಾಘವೇಂದ್ರ ಹೆಗಡೆ

Kannadiga, Techie, Passionate Poet/ Writer, Amateur photographer, Nature lover etc... iBlogs @ https://raganouke.wordpress.com

Posted on 03/12/2011, in ಚಿತ್ರ ತೀರ, ಬ್ಲಾಗ್ ಕುರಿತು, ವಿಶೇಷ, ಹನಿಗವನ, ಹನಿಹರವು (ಕವಿತೆ) and tagged , , , , , , , , , , , , , , , , , , , . Bookmark the permalink. 5 ಟಿಪ್ಪಣಿಗಳು.

  1. happy birthday raganokke,ninna blog sada olle olleya kavithe nidali higi

    Like

  2. Tumba chennagide, I am Impressed 🙂 Tumba chennagide, Samayakkondu mooduva bhavanegalannu padagalalli chennagi sere hidididdiraa. Nimma Kadalige innashtu baraha gala tore,nadi,keregalu bandu serali, kadala alegalu endu heege hariyali.

    Like

  1. ಮರುಕೋರಿಕೆ (Pingback): ಮೂರು… « ರಾ ಗ ನೌ ಕೆ

  2. ಮರುಕೋರಿಕೆ (Pingback): ವರುಷ ಆರು ಹರುಷ ನೂರು..! | ರಾ ಗ ನೌ ಕೆ

ಹೇಗಿದೆ ಹೇಳಿ!