ಹಾದಿಯೊಂದರ ಹಾಡು

ಹಾದಿಯೊಂದರ ಹಾಡು

ಈ ಹಾದಿಯಲ್ಲೀಗ ಕೋಗಿಲೆ ಮಡಿದಿದೆ
ಹಸಿನೆನಪ ಹಾವಳಿಗೆ ಬಿರಿದು ಮೋಡ ತುಸು ಬಿಕ್ಕಿದೆ

ಎದೆಯ ಜೋಗುಳ ಮೊರೆವ ಕಾನನ
ಮೌನ ಸರಣಿಯ ಮಂಥನ
ಕೊರೆವ ಹೆಸರ ಬರೆವ ಉಸಿರೇ
ನೋವ ಕವಿತೆಗೆ ಬಂಧನ

ಹರಿಯಲಿಲ್ಲ ಹನಿಸಲಿಲ್ಲ
ಅಬ್ಧಿಯಂಗಳ ಪಾತ್ರಕೆ
ಉರಿಯಲಿಲ್ಲ ಆರಲಿಲ್ಲ
ಮರೆತು ಹೊರಟ ಮಾತ್ರಕೆ

ತಡಿಯ ಮೋಹ ಕಡಲ ನೋವ
ಬಲ್ಲ ಹೆಜ್ಜೆಗೆ ಯಾವ ಪಾಡು
ನೀಲ ಸ್ಥಂಭಿನಿ ಭಾವ ಸ್ಪಂದಿನಿ
ಭ್ರಮಿಪ ಮಾತ್ರಕೆ ಯಾವ ಹಾಡು?

ಅಡ್ಡ ಸಾಲಿನ ಉದ್ದ ಪದಕೆ
ಇನ್ನು ಬದ್ದವದಾವ ಸಂಕಲ್ಪ?
ಚೂರು ಚೂರೇ ಜಿಟಿವ ಮಳೆಗೆ
ಬಿದ್ದರೂ ಕವಿತೆಗೆ ನೋವು ಅಲ್ಪ ?

ತಿರುಗಿ ಅರಳದ ಕನಸ ಹೂವಿಗೆ
ಪಡಿಯಚ್ಚುಳಿದು ಅಳಿಸದ ಹೆಸರ ಗುಂಗು
ದೂರವಾದ ಹಾಡಿನೆದೆಗೆ
ಮತ್ತೇಕೆ ನನ್ನ ಪದದ ಹಂಗು?

-ರಾಘವೇಂದ್ರ ಹೆಗಡೆ

ಈ ಕವಿತೆ ‘ಪಂಜು‘ವಿನಲ್ಲಿ ಪ್ರಕಟಗೊಂಡಿದೆ.

About ರಾಘವೇಂದ್ರ ಹೆಗಡೆ

Kannadiga, Techie, Passionate Poet/ Writer, Amateur photographer, Nature lover etc... iBlogs @ https://raganouke.wordpress.com

Posted on 29/05/2014, in ಕೊಸರು/ ಕನವರಿಕೆ, ಹನಿಹರವು (ಕವಿತೆ) and tagged , , , , , , , , . Bookmark the permalink. 1 ಟಿಪ್ಪಣಿ.

  1. ಹಂಗು ಮೀರುವ ಉತ್ಕಟತೆ ಇಲ್ಲಿ ಮಾರ್ಧನಿಸಿದೆ. ಸುಪ್ತವಾದ ಮನೋ ವೇದನೆ ಅಡಕವಾಗಿದೆ.

    Liked by 1 person

ಹೇಗಿದೆ ಹೇಳಿ!